ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಲೆಗೈದ ಪತಿ!

61
firstsuddi

ಮಂಗಳೂರು : ಕುಡಿದ ಮತ್ತಿನಲ್ಲಿ ವ್ಯಕಿಯೊಬ್ಬ ತನ್ನ ಪತ್ನಿಯನ್ನೇ ಕೊಲೆಗೈದ ಘಟನೆ ತಾಲೂಕಿನ ಎಕ್ಕಾರು ಪಲ್ಲದಕೋಡಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಸರಿತಾ (35)ಎಂದು ಗುರುತಿಸಲಾಗಿದೆ. ಸರಿತಾಳ ಪತಿ ದುರ್ಗೇಶ್ ಕೊಲೆ ಆರೋಪಿ. ದುರ್ಗೇಶ್ ಕುಡಿದ ಅಮಲಿನಲ್ಲಿ ಸರಿತಾಳೊಂದಿಗೆ ಜಗಳವಾಡಿದ್ದಾನೆ. ಜಗಳ ತಾರಕಕ್ಕೇರಿ ಮರದ ರೀಪಿನಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ್ದಾನೆ.

ಘಟನೆಯ ಸಮಯದಲ್ಲಿ ಮನೆಯಲ್ಲಿದ್ದ ಈ ದಂಪತಿಯ ಪುತ್ರ ರಾಹುಲ್ ಭಯದಿಂದ ಅಜ್ಜಿ ಮನೆಗೆ ಓಡಿಹೋಗಿದ್ದಾನೆ. ಇಂದು ಬೆಳಗ್ಗೆ ಆರೋಪಿ ದುರ್ಗೇಶ್ ತನ್ನ ಅಣ್ಣ ಮಧುಗೆ ಕರೆ ಮಾಡಿ ಪತ್ನಿ ಸತ್ತಿರುವ ವಿಚಾರ ತಿಳಿಸಿದ್ದಾನೆ.

ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ದುರ್ಗೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.