ಬೆಂಗಳೂರು : ಕುಡಿದ ಮತ್ತಿನಲ್ಲಿ ಪಬ್‍ನ ಮೂರನೆ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಯುವತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚರ್ಚ್ ಸ್ಟ್ರೀಟ್‍ನಲ್ಲಿ ಇರುವ ಆಶ್‍ಬೀರ್ ಪಬ್‍ನಲ್ಲಿ ನಡೆದಿದೆ. ಪವನ್ ಅತ್ತಾವರ್ ಹಾಗೂ ವೇದಾ ಮೃತರು ಎನ್ನಲಾಗಿದ್ದು, ನಿನ್ನೆ ರಾತ್ರಿ 11:30 ರ ಸುಮಾರಿಗೆ ಪವನ್ ಅತ್ತಾವರ್ ಹಾಗೂ ವೇದಾ ಅವರು ಪಬ್‍ಗೆ ಬಂದಿದ್ದು, ಕೊನೆಯ ರೂಫ್ ಫ್ಲೋರ್‍ನಲ್ಲಿ ಕುಳಿತು ಪಾರ್ಟಿ ಮಾಡಿ ರೂಫಿನ ತುದಿಯಲ್ಲಿ ನಿಂತಿದ್ದರು. ಈ ವೇಳೆ ಇಬ್ಬರೂ ಒಟ್ಟಿಗೆ ಆಯತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










