ನೆರೆ ಸಂತ್ರಸ್ತರಿಗೆ ಕುರುಕ್ಷೇತ್ರ ಸಿನಿಮಾದ ಸಂಭಾವನೆಯನ್ನು ನೀಡಿದ ನಿಖಿಲ್ ಕುಮಾರಸ್ವಾಮಿ…

367
firstsuddi

ಬೆಂಗಳೂರು : ನಿಖಿಲ್ ಕುಮಾರಸ್ವಾಮಿ ಅವರು ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ತಮ್ಮ ಕುರುಕ್ಷೇತ್ರ ಸಿನಿಮಾದ ಸಂಭಾವನೆಯನ್ನು ನೀಡಿದ್ದು, ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ. ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಸಿನಿಮಾದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದ ನಿಖಿಲ್ ಕುಮಾರಸ್ವಾಮಿ ಅವರು ಈ ಚಿತ್ರದಿಂದ ಬಂದ ಸಂಭಾವನೆಯನ್ನು ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ತರಿಗೆ ನೀಡುವುದಾಗಿ ಖುದ್ದಾಗಿ ನಿಖಿಲ್ ಕುಮಾರಸ್ವಾಮಿ ಅವರೇ ಘೋಷಿಸಿದ್ದಾರೆ. ಜೆಡಿಎಸ್ ರಾಜ್ಯ ಯುವಘಟಕದ ಅಧ್ಯಕ್ಷರಾಗಿರುವ ಅವರು, ತಮ್ಮ ಪಕ್ಷದ ಪರವಾಗಿ ಕರ್ನಾಟಕ ಹಾಗೂ ಕರಾವಳಿ ಭಾಗದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬೇಕಾಗಿರುವ ವಸ್ತಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.