ಕೆಂದ್ರ ಬಜೆಟ್ 2023 : ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ…

46
firstsuddi

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 5ನೇ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದ್ದು, ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ.

ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿವರ್ತಿಸುವ ಕುರಿತ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಮಾತ್ರ ಬಾಕಿ ಇದೆ.

ಭದ್ರಾ ಮೇಲ್ದಂಡೆ ಯೋಜನೆಗೆ ಒಟ್ಟು 23 ಸಾವಿರ ಕೋಟಿ ವೆಚ್ಚವಾಗಲಿದೆ. ಸದ್ಯ 16 ಸಾವಿರ ಕೋಟಿ ವೆಚ್ಚದ ಕೆಲಸ ಬಾಕಿ ಇದೆ. ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾದ ಬಳಿಕ ಉಳಿಯುವ ಒಟ್ಟು ಕಾಮಗಾರಿಯ ವೆಚ್ಚದಲ್ಲಿ ಶೇ 60ರಷ್ಟನ್ನು ಕೇಂದ್ರ ಸರ್ಕಾರವೇ ನೀಡುತ್ತದೆ. ಕೇಂದ್ರದಿಂದ ಸುಮಾರು 5,300 ಕೋಟಿ ಸಿಗುವ ನಿರೀಕ್ಷೆ ಇದೆ ಎಂದು ಜಲಸಂಪನ್ಮೂಲ ಸಚಿವ ಸಚಿವ ಗೋವಿಂದ ಕಾರಜೋಳ ಅಪೇಕ್ಷೆ ವ್ಯಕ್ತಪಡಿಸಿದ್ದರು. ಅದರಂತೆ ಇಂದು ಕೇಂದ್ರ ಬಜೆಟ್ ನಲ್ಲಿ 5,300 ಕೋಟಿ ರೂ. ಅನುದಾನ ಒದಗಿಸಲಾಗಿದೆ.