ಕೆಎಂಎಫ್ ನ ನಂದಿನಿ ಇಡ್ಲಿ ಮತ್ತು ದೋಸೆ ಹಿಟ್ಟಿಗೆ ಭಾರೀ ಬೇಡಿಕೆ.

31

ಬೆಂಗಳೂರು: ಕರ್ನಾಟಕ ಹಾಗೂ ಹೊರರಾಜ್ಯಗಳಲ್ಲಿ ಜನರ ಮನಗೆದ್ದಿರುವ ನಂದಿನಿ ಬ್ರ್ಯಾಂಡ್ ಇದೀಗ ಮತ್ತೊಂದು ಮೈಲಿಗಲ್ಲು ಬರೆಯಲು ಸಿದ್ಧತೆ ಮಾಡಿಕೊಂಡಿದೆ. ಇತ್ತೀಚೆಗಷ್ಟೇ ನಗರದಲ್ಲಿ ಪ್ರಾಯೋಗಿಕವಾಗಿ ಕರ್ನಾಟಕ ಮಿಲ್ಕ್ ಫೆಡರೇಶನ್ ಮಿಲಪರಿಚಯ ಮಾಡಿದ್ದ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಭಾರೀ ಬೇಡಿಕೆ ಉಂಟಾಗಿದ್ದು, ಈ ಯಶಸ್ವಿ ಬೆನ್ನಲ್ಲೇ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಈ ಹಿಟ್ಟನ್ನು ವಿತರಿಸಲು ಕೆಎಂಎಫ್ ನಿರ್ಧಾರ ಮಾಡಲಾಗಿದೆ. ಕರ್ನಾಟಕ ಮಿಲ್ಕ್ ಫೆಡರೇಶನ್‍ನ ನಂದಿನಿ ಬ್ರ್ಯಾಂಡ್ ಪ್ರಾಯೋಗಿಕವಾಗಿ ಬೆಂಗಳೂರಿನ ಹಿಟ್ಟಿನ ಮಾರಾಟ ಆರಂಭ ಮಾಡಲು ಕೆಎಂಎಫ್ ಮುಂದಾಗಿದೆ. ನಂದಿನಿ ಪರಿಚಯಿಸಿರುವ ದೋಸೆ ಹಿಟ್ಟಿನಲ್ಲಿ ವೇ-ಪ್ರೋಟಿನ್ ಕೂಡ ಇರುವುದರಿಂದ ಡಯಟ್, ಜಿಮ್ ಬಗ್ಗೆ ಗಮನಹರಿಸುವವರು ಕೂಡ ಈ ಹಿಟ್ಟಿನ ಮೊರೆಹೋಗುತ್ತಿದ್ದಾರೆ. ಸದ್ಯ ಸಿಲಿಕಾನ್ ಸಿಟಿಯಲ್ಲಿ 900 ಗ್ರಾಂ ದೋಸೆ ಹಿಟ್ಟಿಗೆ 80 ರೂ. ಹಾಗೂ 450 ಗ್ರಾಂ ಪ್ಯಾಕ್ ದೋಸೆ ಹಿಟ್ಟಿಗೆ 40 ರೂ. ಬೆಲೆ ನಿಗದಿಪಡಿಸಿದೆ. ಇದೇ ಮೊದಲ ಬಾರಿಗೆ ದೋಸೆ ಹಿಟ್ಟಿಗೆ ಶೇಕಡ 5 ರಷ್ಟು ವೇ-ಪ್ರೋಟಿನ್ ಸೇರಿಸಿ ಜನರಿಗೆ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಕಳೆದ ಡಿಸೆಂಬರ್ 26ರಂದು ನಂದಿನಿ ಬ್ರ್ಯಾಂಡ್ ವತಿಯಿಂದ ಮೊದಲ ಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ-ಪ್ರೋಟಿನ್ ಆಧಾರಿತ ದೋಸೆ ಮತ್ತು ಇಡ್ಲಿ ಹಿಟ್ಟನ್ನು ಬಿಡುಗಡೆ ಮಾಡಿದ್ದರು.