ಕೆಎಸ್‌ಆರ್‌ಟಿಸಿ-ಜೀಪ್ ನಡುವೆ ಭೀಕರ ಅಪಘಾತ- ನಾಲ್ವರ ದುರ್ಮರಣ…

51
firstsuddi

ಮೈಸೂರು: ಕೆಎಸ್‌ಆರ್‌ಟಿಸಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಚಾಲಕ ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ ನಡೆದಿದೆ.

ಜೀಪ್ ಹೆಚ್‌ಡಿ ಕೋಟೆಯಿಂದ ಬರುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿದವರು ಕೂಲಿ ಕಾರ್ಮಿಕರು ಎಂಬ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.