ತುಮಕೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಆಟೋ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋದಲ್ಲಿದ್ದ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಸಮೀಪವಿರುವ ಜಯಮಂಗಲಿ ಬ್ರಿಡ್ಜ್ ಬಳಿ ನಡೆದಿದೆ.
ಮೃತರನ್ನು ಜೋಗೇನಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಎಂದು ಗುರುತಿಸಲಾಗಿದೆ. ಆಟೋ, ಮಹಿಳೆಯರನ್ನು ಕರೆದುಕೊಂಡು ಗೌರಿಬಿದನೂರು ಗಾರ್ಮೆಂಟ್ಸ್ ಫ್ಯಾಕ್ಟರಿಗೆ ತೆರಳುತ್ತಿತ್ತು. ಈ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ 9 ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










