ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು…

69
firstsuddi

ವಿಜಯಪುರ : ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಹೊನಗನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೆಟ್ಟು ನಿಂತಿದ್ದ ಲಾರಿ ದುರಸ್ಥಿಯಲ್ಲಿ ಚಾಲಕ ನಿರತನಾಗಿದ್ದ. ಈ ವೇಳೆ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ವಿಜಯಪುರ ನಗರ ಮೂಲದ ವ್ಯಕ್ತಿ, ಮಹಿಳೆ, ಮಗು ಮತ್ತು ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇತರ ಮೂವರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಹಾಗೂ ಗಾಯಗೊಂಡವರ ಗುರುತು ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.