ಕೆರಗೋಡು ಹನುಮ ಧ್ಜಜ ವಿವಾದ: ಹಿಂದೂಪರ ಸಂಘಟನೆಗಳಿಂದ ಬಂದ್ ಗೆ ಕರೆ…

50
firstsuddi

ಮಂಡ್ಯ: ಜಿಲ್ಲೆಯ ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ದ್ವಜ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಉಂಟಾದ ವಿವಾದದಿಂದಾಗಿ ಹಿಂದೂ ಪರ ಸಂಘಟನೆಗಳು ಇಂದು ಮಂಡ್ಯ ಬಂದ್ ಗೆ ಕರೆ ನೀಡಿವೆ.

ಕೆರಗೋಡು ಗ್ರಾಮದ ರಂಗಮಂದಿರ ಮುಂದೆ ಸ್ಥಾಪಿಸಿರುವ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜ ಹಾರಿಸಬೇಕು ಎಂದು ಒತ್ತಾಯಿಸಿ ವಿಹೆಚ್ ಪಿ, ಭಜರಂಗದಳ, ಭಜರಂಗ ಸೇನೆ, ಶ್ರೀರಾಮ ಸೇನೆ ಕಾರ್ಯಕರ್ತರು ಬಂದ್ ಗೆ ಕರೆ ನೀಡಿದ್ದಾರೆ.

ಕೆರಗೋಡು ಗ್ರಾಮದಿಂದ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್‌ ಬೈಕ್‌ ರ್ಯಾಲಿ ನಡೆದಿದೆ. ಬಂದ್‍ನ ಪರಿಣಾಮವಾಗಿ ನಗರದ ಬಹುತೇಕ ಭಾಗಗಳಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ. ಅಹಿತಕರ ಘಟನೆಗಳಿಗೆ ಆಸ್ಪದವಾಗದಿರಲು ನಗರದಾದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಬಂದ್‌ಗೆ ಜೆಡಿಎಸ್, ಬಿಜೆಪಿ ನೇರ ಬೆಂಬಲ ನೀಡುತ್ತಿಲ್ಲ, ಬಿಜೆಪಿ ಬಾಹ್ಯ ಬೆಂಬಲ ಮಾತ್ರ ನೀಡುತ್ತಿದ್ದರೆ, ಜೆಡಿಎಸ್ ಅಂತರ ಕಾಯ್ದುಕೊಂಡಿದೆ. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಬಂದ್‌ಗೆ ಬಿಜೆಪಿ, ಜೆಡಿಎಸ್ ಬೆಂಬಲ ನೀಡುತ್ತಿಲ್ಲ ಎಂದು ಬಿಜೆಪಿ ಮುಖಂಡ ಜಯರಾಂ ತಿಳಿಸಿದ್ದಾರೆ.