ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು…

147
firstsuddi

ಮೈಸೂರು : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಘಿರುವ ಘಟನೆ ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರೀತಂ(11) ಹಾಗೂ ಅರ್ಜುನ್(12) ಮೃತ ಬಾಲಕರು ಎಂದು ಗುರುತಿಸಲಾಗಿದ್ದು, ಮೃತ ಬಾಲಕರು ಮಹಾಮಾರಿ ಕೊರೊನಾ ವೈರಸ್‍ನಿಂದ ಶಾಲೆಗೆ ರಜೆ ಇರುವುದರಿಂದ ಮನೆಯಲ್ಲೇ ಕುಳಿತು ಬೇಜಾರಾಗಿದೆ ಎಂದು ಕೆರೆಯಲ್ಲಿ ಈಜಲು ತೆರಳಿದ್ದು, ಪರಿಣಾಮ ಇಬ್ಬರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದು, ಬಾಲಕರ ಮೃತದೇಹವನ್ನು ಕೆರೆಯಿಂದ ಹೊರ ತೆಗೆಯಲಾಗಿದ್ದು, ಮೃತದೇಹವನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಹೆಚ್.ಡಿ. ಕೋಟೆ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.