ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ತಂದೆ ಮಗ ನೀರುಪಾಲು…

203
firstsuddi

ಮೈಸೂರು : ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ತಂದೆ ಮಗ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ಮೂಲೆಪೆಟ್ಲು ಗ್ರಾಮದಲ್ಲಿ ನಡೆದಿದೆ. ಸುರೇಶ್(45) ಹಾಗೂ ವಿಕಾಸ್(16) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತರು ತಮ್ಮ ಹಸುಗಳನ್ನು ತೊಳೆಯಲೆಂದು ಗ್ರಾಮದ ಕೆರೆ ಬಳಿ ತೆರಳಿದ್ದು, ಈ ವೇಳೆ ಕಾಲು ಜಾರಿ ಇಬ್ಬರು ಕೆರೆಗೆ ಬಿದ್ದು ನೀರು ಪಾಲಾಗಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಈಜುಗಾರರ ನೆರವಿನಿಂದ ಮೃತದೇಹವನ್ನು ಹೊರ ತೆಗೆದಿದ್ದು, ಕೆ.ಆರ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.