ಶಿವಮೊಗ್ಗ : ಕೆಲವು ಮುಸಲ್ಮಾನ್ ಗೂಂಡಾಗಳಿಗೆ ನಗರದಲ್ಲಿ ಪೊಲೀಸರದ್ದಾಗಲಿ, ಸರ್ಕಾರದ್ದಾಗಲಿ ಭಯ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಕಿಡಿಕಾರಿದ್ದಾರೆ.
ನಿನ್ನೆ ರಾತ್ರಿ ನಗರದಲ್ಲಿ ನಡೆದ ಘಟನೆಯ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಹರ್ಷನ ಕೊಲೆ ನಂತರ ಎನ್ ಐಎಗೆ ವಹಿಸಿದ ನಂತರ ಸಾಕಷ್ಟು ಪ್ರಕರಣ ಬೆಳಕಿಗೆ ಬಂದಿದೆ. ಲಾಂಗ್, ಮಚ್ಚು ಬಳಸಿಲ್ಲ, ಕಲ್ಲಿನಿಂದ ಹೊಡೆದಿದ್ದಾರೆ. ಪಿಎಫ್ ಐ ಸಂಘಟನೆ ಕೈವಾಡ ಇದೆಯೋ, ಅಥವಾ ಬೇರೆ ಗೂಂಡಾಗಳ ಕೈವಾಡ ಇದೆಯೋ ಎಂಬುದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ. ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಳ್ಳಬೇಕು. ಸರ್ಕಾರ ಹೆಚ್ಚಿನ ಕ್ರಮ ವಹಿಸಬೇಕು ಎಂದು ಸಚಿವರು ಒತ್ತಾಯಿಸಿದರು.
ಶಿವಮೊಗ್ಗದಲ್ಲಿ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ ಶಾಂತಿಯುತವಾಗಿ ನಡೆದಿತ್ತು. ಸಾವಿರಾರು ಮಂದಿ ಈ ಕಾರ್ಯಕ್ರಮಕ್ಕೆ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರ ಧರ್ಮದ ಬಗ್ಗೆ ಮಾತನಾಡಿದ್ದಾರೆ. ಆದರೆ ಯಾರೂ ಕೂಡಾ ಉತ್ತೇಜನ ಕೊಡುವಂತಹ ಮಾತು ಆಡಿಲ್ಲ. ಹಿಂದೂ ಅಂತಾ ಗಮನಿಸಿ ಪ್ರಕಾಶ್ ಮೇಲೆ ಹಲ್ಲೆ ನಡೆದಿದೆ ಎಂದರು.
ಮುಸಲ್ಮಾನ ಹಿರಿಯರು ಅವರ ಮಕ್ಕಳಿಗೆ ಬುದ್ಧಿ ಹೇಳಬೇಕು. ರಾಷ್ಟ್ರ ದ್ರೋಹಿ ಚಟುವಟಿಕೆಯಲ್ಲಿ ಭಾಗವಹಿಸದಂತೆ ತಿಳಿ ಹೇಳಬೇಕು. ನೀವು ಬುದ್ಧಿ ಹೇಳದಿದ್ದರೆ ಅರೆಸ್ಟ್ ಆಗ್ತಾರೆ. ಜೈಲಿಗೆ ಹೋಗಿ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಹಿಂದುತ್ವ ಜಾಗೃತಿ ಆಗಿರೋದು ಕಂಡು ಸಹಿಸದೇ ಇಂತಹ ದುಷ್ಕೃತ್ಯ ನಡೆಸಿದ್ದಾರೆ. ಹಿಂದೂ ಸಮಾಜದಲ್ಲಿ ಇಂತಹ ದುಷ್ಕೃತ್ಯ ನಡೆದಿಲ್ಲ. ಮುಸಲ್ಮಾನ ಗೂಂಡಾಗಳೇ ಇಂತಹ ಕೆಲಸ ಮಾಡ್ತಿದ್ದಾರೆ. ಹರ್ಷನ ಮನೆ ಬಳಿ ಹೋಗಿ ಬೆದರಿಕೆ ಹಾಕಿದವರ ಬಂಧಿಸಬೇಕು. ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.










