ಕೆಲಸ ಮಾಡುತ್ತಿದ್ದ ಅಂಗಡಿಗೆ ಕನ್ನ ಹಾಕಿದ್ದ ಇಬ್ಬರು ಖದೀಮರು ಅರೆಸ್ಟ್…

61
firstsuddi

ರಾಯಚೂರು : ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣವನ್ನು ಕದ್ದ ಕಳ್ಳರನ್ನು ನೇತಾಜಿ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 11 ಲಕ್ಷ 86 ಸಾವಿರ ರೂ. ಮೌಲ್ಯದ 205 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ನಿಖಿಲ್ ಹಾಗೂ ಲಕ್ಷ್ಮಿಕಾಂತ್ ಬಂಧಿತ ಆರೋಪಿಗಳು. ಇವರು ನಗರದ ಬಂಗಾರ ಬಜಾರ್ ನಲ್ಲಿರುವ ದೋತ್ರಬಂಡಿ ಅಶೋಕ ಬಂಗಾರದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಇಬ್ಬರು ಅಂಗಡಿಯಲ್ಲಿ ಆಳವಡಿಸಿದ ಸಿಸಿ ಕ್ಯಾಮರಾ ಬಂದ್ ಮಾಡಿ ಕಳ್ಳತನ ಮಾಡಿ, ಪುನಃ ಕ್ಯಾಮೆರಾ ಆನ್ ಮಾಡುತ್ತಿದ್ದರು. ದಿನೇ ದಿನೇ ಚಿನ್ನಾಭರಣ ಕಾಣೆಯಾಗುತ್ತಿರುವುದನ್ನು ಗಮನಿಸಿದ ಅಂಗಡಿ ಮಾಲೀಕ ಈ ಕುರಿತು ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.