ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ವಿವಾಧಾತ್ಮಕ ಬರಹ-ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಬಂಧನ…

151
firstsuddi

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ವಿವಾಧಾತ್ಮಕ ಬರಹ ಬರೆದ ಹಿನ್ನೆಲೆ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆನಂದ ಪ್ರಸಾದ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್‍ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ವಿವಾಧಾತ್ಮಕ ಬರಹವನ್ನು ಬರೆದಿದ್ದಾರೆ ಎಂದು ಆನಂದ ಪ್ರಸಾದ್ ಅವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505(1)(b), 505(1)(C), 153ರ ಅಡಿಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಈ ದೂರಿನ ಅನ್ವಯ ನಿನ್ನೆ ರಾತ್ರಿ ಆನಂದ್ ಪ್ರಸಾದ್ ಅವರನ್ನು ಕೆ.ಆರ್ ಪುರಂ ನಲ್ಲಿರುವ ತಮ್ಮ ನಿವಾಸದಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.