ನವದೆಹಲಿ : ಇಂದು 2022-23ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿದ್ದು, 2022-23ರ ವೇಳೆಗೆ 5ಜಿ ಮೊಬೈಲ್ ಸೇವೆಗಳನ್ನು ಒದಗಿಸಲು ಕ್ರಮವಹಿಸಲಾಗುವುದು. 5ಜಿ ಬಿಡುಗಡೆಗಾಗಿ 2022ರಲ್ಲಿ ಸ್ಪೆಕ್ಟ್ರಮ್ ಹರಾಜು ನಡೆಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಅವರು ತಿಳಿಸಿದ್ದಾರೆ.
ಅಲ್ಲದೇ ಕೇಂದ್ರ ಸರ್ಕಾರ ಡಿಜಿಟಲ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ ಪಠ್ಯ ಬೋಧಿಸಲು 200 ಪ್ರಾದೇಶಿಕ ಟಿವಿ ಚಾನೆಲ್ ಗಳನ್ನು ತೆರೆಯಲಾಗುತ್ತದೆ. ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಇದೊಂದು ದೊಡ್ಡ ನಿರ್ಧಾರವಾಗಿದ್ದು, ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರಿಯ ಗುಣಮಟ್ಟದ ಶಿಕ್ಷಣ ನೀಡಲು ಈ ಯೋಜನೆ ತರಲಾಗಿದೆ ಎಂದು ಮಾಹಿತಿ ನೀಡಿದರು.










