ಕೇಂದ್ರ ಬಜೆಟ್ 2025: 120 ಹೊಸ ವಿಮಾನ ನಿಲ್ದಾಣ ನಿರ್ಮಾಣ.

32

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಉಡಾನ್ ಯೋಜನೆ ಅಡಿಯಲ್ಲಿ 120 ನಗರಗಳಲ್ಲಿ ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಇದು ಮುಂದಿನ 10 ವರ್ಷಗಳಲ್ಲಿ 4 ಕೋಟಿ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ನೂತನ ಏರ್‍ಪೋರ್ಟ್ ಮಾಡಲಿದೆ ಎಂದು ಹೇಳಿದ್ದಾರೆ. ಸಾಮಾನ್ಯ ಜನರ ಕೂಡ ವಿಮಾನದಲ್ಲಿ ಪ್ರಯಾಣ ಮಾಡಲು ನೆರವಾಗಲೆಂದು, ಕೇಂದ್ರ ಸರ್ಕಾರ 2017 ರಲ್ಲಿ ಉಡಾನ್ ಯೋಜನೆಯನ್ನು ಪರಿಚಯಿಸಿತ್ತು. ಈ ಯೋಜನೆ ಅಡಿಯಲ್ಲಿ 120 ನಗರಗಳಲ್ಲಿ ನೂತನ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲಾಗುತ್ತದೆ. ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ. ಅಲ್ಲದೇ ಬಿಹಾರದಲ್ಲಿ ಗ್ರೀನ್ ಫಿಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಜೊತೆಗೆ ಪಾಟ್ನಾ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.