ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಅವರಿಗೆ ಕೊರೊನಾ ದೃಢ…

335
firstsuddi

ನವದೆಹಲಿ : ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಃ ಸಚಿವರೇ ತಮ್ಮ ಟ್ವಿಟರ್ ಮೂಲಕ ಖಚಿತಪಡಿಸಿದ್ದಾರೆ.
“ನಾನು ಕೋವಿಡ್-19  ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ.” “ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.