ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ಅವರಿಗೆ ಕೋವಿಡ್ ಸೋಂಕು ದೃಢ…

135
firstsuddi

ನವದೆಹಲಿ: ಕೇಂದ್ರ ಶಿಕ್ಷಣ ಸಚಿವರಾದ ರಮೇಶ್ ಪೋಕ್ರಿಯಾಲ್ ನಿಶಾಂಕ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನಗೆ ಇಂದು ಕೊರೊನಾ ಪಾಸಿಟಿವ್ ತಗುಲಿರುವುದು ದೃಢಪಟ್ಟಿದೆ. ನನ್ನ ವೈದ್ಯರ ಸಲಹೆಯಂತೆ ನಾನು ಔಷಧಿ ಮತ್ತು ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.