ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ.

56
firstsuddi

ನವದೆಹಲಿ : ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ರಾಜೀನಾಮೆ ನೀಡಿದ್ದಾರೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜ್ಯಸಭೆಯ ಅವಧಿ ಗುರುವಾರ(ನಾಳೆ)ಕೊನೆಗೊಳ್ಳಲಿದೆ. ಆದರೆ ನಖ್ವಿ ಒಂದು ದಿನ ಮುಂಚೆಯೇ ರಾಜೀನಾಮೆ ನೀಡಿದ್ದಾರೆ.

ನಖ್ವಿ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಉಪರಾಷ್ಟ್ರಪತಿ ಸ್ಥಾನಕ್ಕೆ ಪರಿಗಣಿಸುವ ಸಾಧ್ಯತೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಬಿಜೆಪಿ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರ ಪ್ರವಾದಿ ಕುರಿತ ವಿವಾದಾತ್ಮಕ ಹೇಳಿಕೆ ದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿರುವಾಗ ಮುಸ್ಲಿಂ ನಾಯಕರೊಬ್ಬರನ್ನು ಉಪರಾಷ್ಟ್ರಪತಿ ಹುದ್ದೆಗೆ ಪರಿಗಣಿಸಲು ಬಿಜೆಪಿ ಲೆಕ್ಕಚಾರ ನಡೆಸುತ್ತಿದೆ ಎಂದು ಹೇಳಲಾಗಿದೆ.