ನವದೆಹಲಿ : ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಕೋವಿಡ್–19 ದೃಢಪಟ್ಟಿದೆ. 2020ರಲ್ಲಿಯೂ ಅವರಿಗೆ ಸೋಂಕು ತಗುಲಿತ್ತು.
ಈ ಸಂಬಂಧ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ದೆಹಲಿಯ ರಾಜೇಂದ್ರ ನಗರದಲ್ಲಿ ನಡೆದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಕೋವಿಡ್–19 ಪರೀಕ್ಷಾ ವರದಿ ಪಾಸಿಟಿವ್ ಬಂದಿರುವುದರಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ. ಬಿಜೆಪಿ ಅಭ್ಯರ್ಥಿ ರಾಜೇಶ್ ಭಾಟಿಯಾಗೆ ಮತ ನೀಡಿ ಪಕ್ಷವನ್ನು ಗೆಲ್ಲಿಸುವಂತೆ ರಾಜೇಂದ್ರ ನಗರದ ಜನತೆಯಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.










