ಬೆಂಗಳೂರು : ಕೇಂದ್ರ ಸರ್ಕಾರ ಈಗಾ ಬಿಡುಗಡೆ ಮಾಡಿರುವ ನೆರೆ ಪರಿಹಾರ ಹಣ ಸಾಕಾಗುವುದಿಲ್ಲ. ಪುನಃ ಹೆಚ್ಚಿನ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಈಗಾ ಎರಡು ಕಂತಿನಲ್ಲಿ ಪರಿಹಾರ ಹಣ ಬಿಡುಗಡೆ ಮಾಡಿದೆ. ಇದು ಆರಂಭ, ಪುನಃ ಹೆಚ್ಚಿನ ಹಣ ಬಿಡುಗಡೆ ಮಾಡುವ ವಿಶ್ವಾಸ ನನಗಿದೆ. ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದು ಹೋದ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡಿದ್ದಾರೆ. ಎರಡನೇ ಕಂತಿನಲ್ಲಿ 1869.85 ಕೋಟಿ ಹಣ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು. ಹೀಗಾಗಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪರಿಹಾರ ಬಿಡುಗಡೆ ಮಾಡುವುದಾಗಿ ಮನವಿ ಮಾಡುತ್ತೇನೆ ಎಂದರು.










