ನವದೆಹಲಿ : ಕೇಂದ್ರ ಸರ್ಕಾರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಹಾಗೂ ಮುಂತಾದ ಬಿಜೆಪಿ ನಾಯಕರು ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ಅರುಣ್ ಜೇಟ್ಲಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಉಸಿರಾಟ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಆ.9ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಬಗ್ಗೆ ವಿಶೇಷ ವೈದ್ಯರ ತಂಡ ತಪಾಸಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದ್ದು, ಅರುಣ್ ಜೇಟ್ಲಿ ಅವರ ನಿವಾಸದ ಮುಂದೆ ಬಿಗಿಬಂದೋಬಸ್ತ್ ಮಾಡಲಾಗಿದೆ.










