ಕೇಂದ್ರದ ಮಾಜಿ ಸಚಿವ ವೀರೇಂದ್ರ ಕುಮಾರ್ ವಿಧಿವಶ…

154
firstsuddi

ತಿರುವನಂತಪುರಂ : ಕೇಂದ್ರದ ಮಾಜಿ ಸಚಿವ, ರಾಜ್ಯ ಸಭಾ ಸದಸ್ಯ ವೀರೇಂದ್ರ ಕುಮಾರ್(84) ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಲೋಕತಾಂತ್ರಿಕ ಜನತಾದಳದ ಅಧ್ಯಕ್ಷರಾಗಿದ್ದ ವೀರೇಂದ್ರ ಕುಮಾರ್ ಅವರು ಅನಾರೋಗ್ಯದ ಕಾರಣದಿಂದಾಗಿ ಸಕ್ರೀಯ ರಾಜಕೀಯದಿಂದ ದೂರ ಉಳಿದಿದ್ದರು. ಇವರು 1968ರಲ್ಲಿ ಸಂಯುಕ್ತ ಸೋಷಿಯಲಿಸ್ಟ್ ಪಕ್ಷದ ಮೂಲಕ ಮೊದಲ ಬಾರಿಗೆ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು, 1996 ಹಾಗೂ 97ರಲ್ಲಿ ಕೋಜಿಕ್ಕೋಡ್ ಸಂಸದರಾಗಿ ಕೇಂದ್ರದಲ್ಲಿ ಸಚಿವ ಸ್ಥಾನವನ್ನು ಪಡೆದುಕೊಂಡಿದ್ದರು. ಇವರು ಕೇವಲ ರಾಜಕೀಯ ವ್ಯಕ್ತಿಯಲ್ಲದೇ ಉತ್ತಮ ಬರಹಗಾರರು ಆಗಿದ್ದರು. ಇವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ, ಗೌರವಗಳನ್ನು ಪಡೆದುಕೊಂಡಿದ್ದಾರೆ.