ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ…

65
firstsuddi

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ(79) ನಿಧನರಾಗಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಅವರು ಬೆಂಗಳೂರಿನ ಚಿನ್ಮಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 4.25ಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಉಮ್ಮನ್ ಚಾಂಡಿ 1969ರಲ್ಲಿ ಯುವ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷರಾದರು. ಬಳಿಕ 1970ರಲ್ಲಿ ಕೊಟ್ಟಾಯಂ ಜಿಲ್ಲೆಯ ಪುತ್ತುಪಲ್ಲಿಯನ್ನು ಪ್ರತಿನಿಧಿಸಿ ಶಾಸಕರಾದರು. ಒಟ್ಟು 10 ಬಾರಿ ಶಾಸಕರಾಗಿದ್ದ ಉಮ್ಮನ್ ಚಾಂಡಿಯವರು ಜನಪರ ಆಡಳಿತದಿಂದ ಜನಮನ್ನಣೆ ಗಳಿಸಿದ್ದರು. 2004 ರಿಂದ 2006 ಹಾಗೂ 2011 ರಿಂದ 2016ರ ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದರು.

ಉಮ್ಮನ ಚಾಂಡಿ ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜನ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ. ಅಗಲಿದ ಹಿರಿಯ ನಾಯಕನ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.