ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ…

90
firstsuddi

ಮಂಗಳೂರು : ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಕೇರಳದ ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಮೃತ ವಿದ್ಯಾರ್ಥಿನಿ. ಕೊಲಾಸೋ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದ ನೀನಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ನಿನ್ನೆ ಸಂಜೆ ಹಾಸ್ಟೆಲ್ ಕೊಠಡಿಯ ಬಾತ್ ರೂಂನಲ್ಲಿ ನೇಣು ಹಾಕಿಕೊಂಡಿದ್ದಾಳೆ. ಇದನ್ನು ನೋಡಿದ ಮತ್ತೊಬ್ಬ ವಿದ್ಯಾರ್ಥಿನಿ ಆಘಾತಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನೀನಾ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಕಾಲೇಜಿನಲ್ಲಿ ಫೀಸ್ ಕಟ್ಟಲು ಒತ್ತಡ ಹೆಚ್ಚಾದ ಹಿನ್ನೆಲೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.