ಕೇರಳ : ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ…

60
firstsuddi

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ದಕ್ಷಿಣ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲು ತಿರುನಾವಯ ಮತ್ತು ತಿರೂರ್ ನಡುವೆ ಸಂಚರಿಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಈ ರೈಲು ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿತ್ತು.

ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಒಂದು ಕೋಚ್‌ನ ವಿಂಡ್‌ಶೀಲ್ಡ್ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದಕ್ಷಿಣ ರೈಲ್ವೇ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 25 ರಂದು ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ಚಾಲನೆ ನೀಡಿದ್ದರು. ಈ ಹಿಂದೆ ಏಪ್ರಿಲ್ 6 ರಂದು ವಿಶಾಖಪಟ್ಟಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಕಳೆದ ಮೂರು ತಿಂಗಳಲ್ಲಿ ಕಲ್ಲು ತೂರಾಟದ ಮೂರನೇ ಘಟನೆ ಇದಾಗಿದೆ.