ಕೋಝಿಕ್ಕೋಡ್ : ನಟಿ ಹಾಗೂ ರೂಪದರ್ಶಿ ಶಹನಾ (20) ಎಂಬುವರು ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಶಹನಾ ಕಾಸರಗೋಡು ಮೂಲದವರು. ನಿನ್ನೆ ರಾತ್ರಿ 11ರ ಸುಮಾರಿಗೆ ಪರಂಬಿಲ್ ಬಜಾರ್ ನಲ್ಲಿರುವ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ಕಿಟಕಿಯ ಗ್ರಿಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಶಹನಾ ಸಾವಿನ ಬಗ್ಗೆ ಆಕೆಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಪೊಲೀಸರು ಆಕೆಯ ಪತಿ ಸಜ್ಜದ್ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.










