ಕೇರಳದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳ ; ಎರಡು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್…

101
firstsuddi

ತಿರುವನಂತಪುರಂ : ಕೇರಳದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಹಿನ್ನಲೆಯಲ್ಲಿ ಎರಡು ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಸರ್ಕಾರದ ಆದೇಶದಂತೆ ಜುಲೈ 31 ಮತ್ತು ಆಗಸ್ಟ್ 1ರಂದು ಕೇರಳದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ.

ಕಳೆದೆರೆಡು ದಿನಗಳಿಂದ ಕೇರಳದಲ್ಲಿ 40 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಪತ್ತೆಯಾಗಿದೆ. ಹೊಸತಾಗಿ ದೃಢಪಡುತ್ತಿರುವ ಸೋಂಕು ಪ್ರಮಾಣದ ಶೇ.50ರಷ್ಟು ಕೇರಳದಲ್ಲಿಯೇ ಇದೆ. ಬುಧವಾರ ಒಂದೇ ದಿನ 22,056 ಹೊಸ ಪ್ರಕರಣಗಳು ದಾಖಲಾಗಿದ್ದು, 131 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಕೇರಳ ಸರ್ಕಾರ ಬಕ್ರಿದ್ ಹಿನ್ನೆಲೆಯಲ್ಲಿ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಿದ್ದರಿಂದ ಸೋಂಕಿತರ ಸಂಖ್ಯೆ ಭಾರೀ ಏರಿಕೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಇತ್ತೀಚೆಗೆ ನಡೆದ ಕಾರ್ಯಕ್ರಮಗಳೇ ಕೇರಳದಲ್ಲಿ ಸೂಪರ್ ಸ್ಪ್ರೆಡರ್ ಆಗಲು ಕಾರಣ ಎಂದಿದ್ದಾರೆ.

ಇನ್ನು ಕೇರಳದ ಕೋವಿಡ್ ಪರಿಸ್ಥಿತಿ ಅರಿಯಲು ಕೇಂದ್ರ ತಜ್ಞರ ತಂಡ ಭೇಟಿ ನೀಡುತ್ತಿದ್ದು, ನಾಲ್ಕು ಮಂದಿಯ ತಜ್ಞರ ತಂಡ ಶೀಘ್ರವೇ ಕೇರಳಕ್ಕೆ ಆಗಮಿಸಲಿದೆ.