ತಿರುವನಂತಪುರಂ : ಕೇರಳದಲ್ಲಿ ಈ ಬಾರಿಯೂ ಧಾರಾಕಾರ ಮಳೆಯಾಗುತ್ತಿದ್ದು, ಕೇರಳದ ಇಡುಕ್ಕಿ ಜಿಲ್ಲೆಯ ರಾಜಮಾಲಾದಲ್ಲಿ ಭೂ ಕುಸಿತ ಸಂಭವಿಸಿ ಈಗಾಗಲೇ 12 ಮಂದಿ ಮೃತಪಟ್ಟಿದ್ದಾರೆ. ಭೂಕುಸಿತದಿಂದಾಗಿ ಕ್ವಾರ್ಟರ್ಸ್ ಹಾಗೂ ಚರ್ಚ್ ನೆಲಕ್ಕುರುಳಿದ್ದು, 80ಕ್ಕೂ ಹೆಚ್ಚು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಅಲ್ಲದೇ ಈವರೆಗೂ 10 ಮಂದಿಯನ್ನು ಮಣ್ಣಿನ ಅಡಿಯಿಂದ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಕೂಡಲೇ ಭಾರತೀಯ ವಾಯುಪಡೆಯನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ಸರ್ಕಾರಕ್ಕೆ ಸಂದೇಶ ಕಳುಹಿಸಿದ್ದಾರೆ. ಹಾಗೂ ಕೇರಳದ ಇಡುಕ್ಕಿ, ವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳಿಗೆ ಆಗಸ್ಟ್ 11ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.










