ಕೇವಲ 500 ರೂಪಾಯಿಗೆ ಪತ್ನಿಯನ್ನೇ ಮಾರಿದ ಪತಿ ಮಹಾಶಯ!

73
firstsuddi

ಗಾಂಧಿನಗರ : ಪತ್ನಿಯನ್ನ ಕೇವಲ 500 ರೂಪಾಯಿಗೆ ಮಾರಾಟ ಮಾಡಿರುವ ಹೀನ ಕೃತ್ಯವೊಂದು ಗುಜರಾತ್ ನಲ್ಲಿ ನಡೆದಿದೆ.

ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್ ಗೆ ಕರೆದುಕೊಂಡು ಬಂದಿದ್ದ. ಈ ವೇಳೆ ವ್ಯಕ್ತಿಯ ಜೊತೆಗಿದ್ದ ಆತನ ಹೆಂಡತಿಯನ್ನು ನೋಡಿದ ಸೋನು ಶರ್ಮ ಎಂಬಾತ ಆಕೆಯನ್ನು ತನಗೆ ಕೊಡಬೇಕೆಂದು ಕೇಳಿದ್ದ. ಅದಕ್ಕೆ ಒಪ್ಪಿದ ಆತ ಸೋನು ಶರ್ಮನಿಂದ 500 ರೂ. ಪಡೆದು ತನ್ನ ಹೆಂಡತಿಯನ್ನು ಆತನಿಗೆ ಮಾರಾಟ ಮಾಡಿದ್ದ. ಆತನ ಹೆಂಡತಿಯನ್ನು ಖರೀದಿಸಿದ ವ್ಯಕ್ತಿ ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ನಂತರ ಆಕೆಯನ್ನು ಅಲ್ಲೇ ಬಿಟ್ಟು ಹೋಗಿದ್ದಾನೆ.

ಅತ್ಯಾಚಾರ ನಡೆದ ಬಳಿಕ ಆ 21 ವರ್ಷದ ಮಹಿಳೆ ಪೊಲೀಸ್ ಠಾಣೆಗೆ ಬಂದು ತನ್ನ ಗಂಡನ ವಿರುದ್ಧ ದೂರು ನೀಡಿದ್ದಾಳೆ. ಆ ದೂರಿನ ಆಧಾರದಲ್ಲಿ ಘಟನೆ ನಡೆದ 24 ಗಂಟೆಯೊಳಗೆ ಸೋನು ಶರ್ಮ ಹಾಗೂ ಆ ಮಹಿಳೆಯ ಗಂಡನನ್ನು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.