ಕೇಸರಿ ಶಲ್ಯ, ಸ್ಕಾರ್ಫ್ ವಿವಾದ – ವಿದ್ಯಾರ್ಥಿಗಳ ಮಧ್ಯೆ ಗಲಾಟೆ…

106
firstsuddi

ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ಕಾರ್ಫ್ ಹಾಗೂ ಕೇಸರಿ ಶಲ್ಯ ವಿವಾದ ಅಂತ್ಯ ಕಾಣುತ್ತಿದ್ದಂತೆ ಇದೀಗ ಪಿಯು ಕಾಲೇಜಿನಲ್ಲಿ ಗಲಾಟೆ ಆರಂಭಗೊಂಡಿದೆ. ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ಗಾಯಗೊಂಡ ಕೆಲವರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಎರಡು ಗುಂಪುಗಳ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿಯೇ ಹೊಡೆದಾಡಿಕೊಂಡಿದ್ದು, ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯರ ಬೇಜವಾಬ್ದಾರಿಯಿಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ ಎಂದು ಸ್ಥಳಿಯರು ಅಸಮಾಧಾನ ಹೊರಹಾಕಿದ್ದಾರೆ.