ಕೊಂಡೋತ್ಸವ ನೋಡುವ ವೇಳೆ ಮೇಲ್ಛಾವಣಿ ಕುಸಿದು ಮಹಿಳೆ ಸಾವು…

74
firstsuddi

ಮಂಡ್ಯ : ಕೊಂಡೋತ್ಸವ ನೋಡುವ ವೇಳೆ ಮನೆಯ ಸಜ್ಜೆ ಕುಸಿದು ಮಹಿಳೆ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಹುಲಗೆರೆಪುರದಲ್ಲಿ ಬಸವೇಶ್ವರ ದೇವಸ್ಥಾನ ಕೊಂಡೋತ್ಸವ ನೋಡಲು ಹಲವರು ಹಳೆ ಮನೆ ಮೇಲೆ ಹತ್ತಿದರು. ಈ ವೇಳೆ ಜನರ ಭಾರ ತಾಳಲಾರದೇ ಮನೆಯ ಮೇಲ್ಛಾವಣಿ ಕಳಚಿ ಬಿದ್ದಿದೆ. ಪುಟ್ಟಲಿಂಗಮ್ಮ(50) ಎಂಬುವವರು ಸ್ಥಳದಲ್ಲೇ ಮೃತಪಟ್ಟರೆ, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆ ಮತ್ತು ಮದ್ದೂರಿನ ಸರ್ಕಾರಿ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದ್ದು, 10ಕ್ಕೂ ಹೆಚ್ಚು ಮಕ್ಕಳ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ.