ಕೊಡಗು: ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲು…

48
firstsuddi

ಕೊಡಗು: ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾದ ಘಟನೆ ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಮೂಲಗಳ ಪ್ರಕಾರ, ಕುಶಾಲ ನಗರದ ಕೂಡಿಗೆಯಲ್ಲಿ ಕಾವೇರಿ ನದಿಗೆ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾಗಿದ್ದು, ಮೃತರನ್ನು ವಿನೋದ್, ಸಚಿನ್, ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಈ ಮೂವರು ಯುವಕರು ಮುಳ್ಳುಸೋಗೆ, ಚಿಕ್ಕತ್ತೂರು, ಹೆಬ್ಬಾಲೆ ಮೂಲದವರು. ಈ ಮೂವರಲ್ಲಿ ಶ್ರೀನಿವಾಸ್ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಜತೆಯಾಗಿ ಈಜಲು ತೆರಳಿದ್ದ ಮೂವರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದ್ದು, ಯುವಕರು ಒಂದೇ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಕಾರು ನದಿಯ ಬದಿಯಲ್ಲಿ ನಿಂತಿದೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.