ಕೊಡಿಗೆಹಳ್ಳಿ ಗಲಾಟೆ ಕೇಸ್: ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಬಂಧನ.

52

ಬೆಂಗಳೂರು: ಕೊಡಿಗೆಹಳ್ಳಿ ಗಲಾಟೆ ಕೇಸ್‍ಗೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ದೂರಿನ ಮೇರೆಗೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಅಣ್ಣಮ್ಮ ದೇವಿಯ ಉತ್ಸವದ ವಿಚಾರವಾಗಿ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಹಾಗೂ ಸ್ಥಳೀಯರ ಮಧ್ಯೆ ನಿನ್ನೆ ನಡೆದ ಗಲಾಟೆಯಲ್ಲಿ ಲಾಯರ್ ಜಗದೀಶ್ ಅವರು ಗಾಯಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದರು. ನಿನ್ನೆ ನಡೆದ ಘಟನೆಯಲ್ಲಿ ಜಗದೀಶ್ ಗಾಯಗೊಂಡಿದ್ದಕ್ಕೆ ಪೊಲೀಸರೇ ಚಿಕಿತ್ಸೆ ಕೊಡಿಸಿದ್ದರು. ನಂತರ ಮೆಡಿಕಲ್ ಚೆಕಪ್ ಮಾಡಿಸಿ ಪೊಲೀಸರು ಜಗದೀಶ್, ಅವರ ಮಗ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ಇಂದು 11 ಗಂಟೆಯ ನಂತರ ಜಗದೀಶ್ ಅವರನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರು ಪಡಿಸಲಿದ್ದಾರೆ.