ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ 62 ಮಂದಿ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 934ಕ್ಕೆ ಏರಿಕೆಯಾಗಿದೆ. ಹಾಗೂ ಸೋಂಕಿತರ ಸಂಖ್ಯೆ 29,435ಕ್ಕೆ ಏರಿಕೆಯಾಗಿದೆ ಎಂದು ಕೇಮದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ 29,435 ಮಂದಿ ಸೋಂಕಿತರ ಪೈಕಿ 6,868 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 934 ಮಮದಿ ಮೃತಪಟ್ಟಿದ್ದಾರೆ. ಹಾಗೂ 21,632 ಮಂದಿ ಸೋಂಕಿನಿಂದ ಬಳಲುತ್ತಿದ್ದು, ಇವರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ತಿಳಿಸಿದ್ದಾರೆ.










