ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,718 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 67 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 33,050ಕ್ಕೆ ಏರಿಕೆಯಾಗಿದ್ದು, 1,074 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಲ್ಲದೇ 33,050ಮಂದಿ ಸೋಂಕಿತರ ಪೈಕಿ ಈವರೆಗೆ 8325 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಮಾಹಿತಿ ತಿಳಿದು ಬಂದಿದೆ.










