ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 1,120 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,933ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 36 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 392ಕ್ಕೆ ಏರಿಕೆಯಾಗಿದೆ. ಹಾಗೂ ಈವರೆಗೆ 1343 ಮಂದಿ ಗುಣಮುಖರಾಗಿದ್ದಾರೆ. ನಿನ್ನೆ ಒಂದೇ ದಿನ ಮಧ್ಯಪ್ರದೇಶ 1978, ಮಹಾರಾಷ್ಟ್ರ 232, ಗುಜರಾತ್ 114, ಉತ್ತರಪ್ರದೇಶ 75, ರಾಜಸ್ಥಾನ 41 ತಮಿಳುನಾಡು 38 ಹಾಗೂ ಕರ್ನಾಟಕದಲ್ಲಿ 19 ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.










