ಕೊರೊನಾ ಅಟ್ಟಹಾಸ-ಸಾವಿನಲ್ಲೂ ಒಂದಾದ ಸಹೋದರರು…

124
firstsuddi

ಬಾಗಲಕೋಟೆ : ಮಹಾಮಾರಿ ಕೊರೊನಾ ಸೋಂಕಿನಿಂದ ಸಹೋದರರಿಬ್ಬರು ಒಂದೇ ದಿನ ಮೃತಪಟ್ಟಿರುವ ಮನಕಲುಕುವ ಘಟನೆ ನಗರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಇಬ್ಬರು ಸಹೋದರರು ಜು.13ರಂದು ಕೊರೊನಾ ಸೋಂಕಿನಿಂದ ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದಾಗಿನಿಂದಲೂ ಇಬ್ಬರೂ ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಇಂದು ಬೆಳಿಗ್ಗೆ 9ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಅಣ್ಣ ಮೃತಪಟ್ಟಿದ್ದು, ಅಣ್ಣನ ಅಗಲಿಕೆಯಿಂದ ಆಘಾತಗೊಂಡ ತಮ್ಮನೂ ಕೂಡಾ 11:30ರ ಸುಮಾರಿಗೆ ಮೃತಪಟ್ಟಿದ್ದಾರೆ. ಇಬ್ಬರೂ ಒಂದೇ ದಿನ ಸಾವನ್ನಪ್ಪಿರುವುದು ಕುಟುಂಬದಲ್ಲಿ ಆಘಾತವನ್ನುಂಟು ಮಾಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.