ಕೊರೊನಾ ಇದ್ದರೂ ಶಬರಿಮಲೆಗೆ ತೆರಳುತ್ತಿದ್ದ 30 ಮಂದಿ ವಿರುದ್ಧ ಪ್ರಕರಣ ದಾಖಲು…

69
firstsuddi

ಮಂಡ್ಯ : ಕೊರೊನಾ ಪಾಸಿಟಿವ್ ಇದ್ದರೂ ಕೂಡ ಶಬರಿಮಲೆಯಾತ್ರೆಗೆ ತೆರಳುತ್ತಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಇದೀಗ 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಮಂಚೀಬೀಡು ಗ್ರಾಮದ 30 ಮಂದಿ ಕೊರೋನಾ ಪರೀಕ್ಷೆ ಮಾಡಿಸಿದ್ದರು. ವರದಿ ಬರುವವರೆಗೆ ಎಲ್ಲಿಯೂ ತೆರಳದಂತೆ ಸೂಚನೆ ನೀಡಿದ್ದ ಆರೋಗ್ಯ ಇಲಾಖೆ ಕಣ್ತಪ್ಪಿಸಿ ಈ 30 ಮಂದಿ ಯಾತ್ರೆಗೆ ತೆರಳಿದ್ದಾರೆ. ಇತ್ತ, 30 ಜನರ ವರದಿ ಪೈಕಿ 15 ಮಂದಿಗೆ ಸೋಂಕು ದೃಢವಾಗಿದೆ.

ಪಾಸಿಟಿವಿಟಿ ವಿಚಾರ ತಿಳಿಯುತ್ತಿದ್ದಂತೆ ಆರೋಗ್ಯ ಇಲಾಖೆ ಅಲರ್ಟ್ ಆಗಿ ಪೊಲೀಸರ ಸಹಾಯ ಪಡೆದು ಸೋಂಕಿತ ಯಾತ್ರಾರ್ಥಿಗಳನ್ನು ಪತ್ತೆ ಮಾಡಿದ್ದಾರೆ. ಗುಂಡ್ಲುಪೇಟೆ ಬೇಗೂರು ಚೆಕ್ ಪೋಸ್ಟ್ ಬಳಿ ಯಾತ್ರೆಗಳನ್ನ ತಡೆದು ಕೆಆರ್ ಪೇಟೆ ಪಟ್ಟಣ ಹಾಗೂ ಗ್ರಾಮಾಂತರ ಪೊಲೀಸರು ಕರೆತಂದಿದ್ದಾರೆ. ಕೊರೊನಾ ಪಾಸಿಟಿವ್ ಇದ್ದರೂ ನಿಯಮ ಉಲ್ಲಂಘಿಸಿ ಶಬರಿಮಲೆ ಯಾತ್ರೆ ಕೈಗೊಂಡ 30 ಜನರ ವಿರುದ್ಧ ಕೆಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.