ಕೊರೊನಾ ನಾಲ್ಕನೇ ಅಲೆ ಆತಂಕ – ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ…

55
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಾಲ್ಕನೇ ಅಲೆಯ ಆರಂಭದ ಬಗ್ಗೆ ತಜ್ಞರ ತಂಡ ಮುನ್ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಪರಿಶಿಲನೆ ಬಗ್ಗೆ ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಮಧ್ಯಾಹ್ನ 12.30ಕ್ಕೆ ಸಭೆ ನಡೆಯಲಿದೆ. ಸಭೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಸಭೆಯಲ್ಲಿ ಕಂದಾಯ ಸಚಿವ ಅಶೋಕ್, ಆರೋಗ್ಯ ಸಚಿವ ಡಾ. ಸುಧಾಕರ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹಾಗೂ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಸದಸ್ಯರು ಭಾಗಿಯಾಗಲಿದ್ದಾರೆ.

ರಾಜ್ಯದಲ್ಲಿ ನಿನ್ನೆ 8,263 ಮಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಇದರಲ್ಲಿ 60 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,46,934ಕ್ಕೆ ಏರಿಕೆ ಆಗಿದೆ. ಇತ್ತ 63 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯತನಕ 39,05,159 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಎಲ್ಲೂ ಸೋಂಕಿನಿಂದ ಮೃತಪಟ್ಟ ವರದಿಯಾಗಿಲ್ಲ. ಇಲ್ಲಿಯವರೆಗೆ 40,057 ಮಂದಿ ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,676ರಷ್ಟಿದೆ.