ಕೊರೊನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆ : ಸಿಎಂ ಬಿ.ಎಸ್. ಯಡಿಯೂರಪ್ಪ.

208
firstsuddi

ಬೆಳಗಾವಿ : ಕೊರೊನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದಾರೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಜೂನ್ 3ನೇ ವಾರದಲ್ಲಿ ಪರೀಕ್ಷೆ ನಡೆಸುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪ್ರಕಟಿಸಿದ್ದರು.

ಈ ಬಗ್ಗೆ ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪನವರು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದು ಈಗಿನ ಸದ್ಯದ ನಿರ್ಧಾರ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಕೊರೊನಾ ಸೋಂಕು ಇಳಿಮುಖವಾದರೆ ಪರೀಕ್ಷೆ, ಇಲ್ಲದಿದ್ದರೆ ಇಲ್ಲ ಎಂದು ಹೇಳಿದ್ದಾರೆ.

ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಗೊತ್ತಿದೆ. ಈ ಸಂಬಂಧ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಈಗಷ್ಟೇ ಚರ್ಚೆ ಮಾಡಿದ್ದೇನೆ. ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ರಜೆ ಮೇಲೆ ಹೋಗಿದ್ದಾರೆ. ಐಎಎಸ್ ಅಧಿಕಾರಿಯನ್ನ ಆಡಳಿತ ಅಧಿಕಾರಿಯಾಗಿ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.