ಕೊರೊನಾ ಲಸಿಕೆ ಪಡೆದ ಸಿದ್ದಗಂಗಾ ಮಠದ ಸ್ವಾಮೀಜಿ.

102
Firstsuddi

ತುಮಕೂರು : ಇಂದು ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

ತುಮಕೂರಿನ ಸಿದ್ದಲಿಂಗ ಮಠದ ಆವರಣದಲ್ಲಿರುವ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಪೀಠಾಧಿಪತಿ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಕೊರೊನಾ ಲಸಿಕೆ ಪಡೆದುಕೊಂಡರು.

ಈಗಾಗಲೇ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಕೊರೊನಾ ಲಸಿಕೆ ಪಡೆದುಕೊಂಡಿದ್ದು, ಸಾರ್ವಜನಿಕರು ವ್ಯಾಕ್ಸಿನ್ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.