ಕೊರೊನಾ ಲಸಿಕೆ ಪಡೆದವರಿಗಷ್ಟೇ ಮದ್ಯ ; ಎಣ್ಣೆ ಪ್ರಿಯರಿಗೆ ಶಾಕ್ ನೀಡಿದ ಬಾರ್ ಮಾಲೀಕರು!

91
firstsuddi

ಲಕ್ನೋ : ಲಸಿಕೆ ವಿತರಣೆ ಆರಂಭಿಸಿ ಸುಮಾರು ಆರು ತಿಂಗಳಾಗುತ್ತಾ ಬಂದಿದೆ. ಆದರೂ ನಿರೀಕ್ಷಿತ ಮಟ್ಟದಲ್ಲಿ ಲಸಿಕೆ ವಿತರಣೆ ಸಾಧ್ಯವಾಗಿಲ್ಲ. ಒಂದೆಡೆ ಲಸಿಕೆ ಕೊರತೆ ಕಾರಣವಾಗಿದ್ದರೆ ಇನ್ನೊಂದೆಡೆ ಜನರು ಸ್ವಯಂಪ್ರೇರಿತರಾಗಿ ಮುಂದೆ ಬರುತ್ತಿಲ್ಲ. ಲಸಿಕೆ ಪಡೆಯುವಂತೆ ಜನರನ್ನು ಪ್ರೇರೇಪಿಸಲು ಸರ್ಕಾರ ವಿವಿಧ ಮಾರ್ಗಗಳನ್ನು ಅನುಸರಿಸುತ್ತಿದೆ. ಈ ಮಧ್ಯೆ ಉತ್ತರ ಪ್ರದೇಶದ ಬಾರ್ ಮಾಲೀಕರು ಕೊರೊನಾ ಲಸಿಕೆ ಪಡೆದವರಿಗೆ ಮಾತ್ರ ಮದ್ಯ ನೀಡಲು ಮುಂದಾಗಿದ್ದಾರೆ.

ಲಸಿಕೆ ತೆಗೆದುಕೊಳ್ಳದವರಿಗೆ ಮದ್ಯ ಕೊಡುವುದಿಲ್ಲ, ಗ್ರಾಹಕರು ಲಸಿಕೆ ಪಡೆದ ಪ್ರಮಾಣ ಪತ್ರವನ್ನು ತೋರಿಸಿದ ಬಳಿಕ ಅವರಿಗೆ ಮದ್ಯವನ್ನು ನೀಡಲಾಗುತ್ತದೆ. ಈ ಸಂಬಂಧ ಬಾರ್ ಮುಂಭಾಗ ಗೋಡೆಗಳ ಮೇಲೆ “ಲಸಿಕೆ ಪಡೆದವರು ಮಾತ್ರ ಮದ್ಯ ಖರೀದಿಗೆ ಅರ್ಹರು” ಎಂದು ನೋಟಿಸ್ ಅಂಟಿಸಿದ್ದಾರೆ.

ಆದರೆ, ಈ ನಿರ್ಧಾರಕ್ಕೂ, ಸರ್ಕಾರಕ್ಕೂ ಯವುದೇ ಸಂಬಂಧವಿಲ್ಲ ಎಂದು ಅಲ್ಲಿನ ಮ್ಯಾಜಿಸ್ಟ್ರೇಟ್ ಸ್ಪಷ್ಟಪಡಿಸಿದ್ದು, ಬಹುಶಃ ಬಾರ್ ಮಾಲಿಕರೇ ಲಸಿಕೆ ವಿತರಣೆಯನ್ನು ಪ್ರೇರೆಪಿಸುವ ಸಲುವಾಗಿ ಈ ನಿರ್ಧಾರವನ್ನು ಕೈಗೊಂಡಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.