ಕೊರೊನಾ ಲಾಕ್‍ಡೌನ್‍ನಿಂದ ಸಂಕಷ್ಠಕ್ಕೆ ಸಿಲುಕಿರುವ ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಧಾವಿಸಬೇಕು : ಹೆಚ್‍ಡಿಕೆ ಒತ್ತಾಯ…

116
firstsuddi

ಬೆಂಗಳೂರು : ಕೊರೊನಾ ಲಾಕ್‍ಡೌನ್‍ನಿಂದ ಸಂಕಷ್ಠಕ್ಕೆ ಸಿಲುಕಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡಿ ತುರ್ತು ನೆರವಿಗೆ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೋನ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಬೇಕು. ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು.