ಕೊರೊನಾ ಸಂಕಷ್ಟದ ಸಮಯದಲ್ಲೂ ಮತ್ತೆ ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ ಸುದೀಪ್…

154
firstsuddi

ಬೆಂಗಳೂರು : ಇತ್ತೀಚೆಗಷ್ಟೆ ಚಿತ್ರದುರ್ಗದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಗೆ ಮುಂದಾಗಿದ್ದ ನಟ ಕಿಚ್ಚ ಸುದೀಪ್ ಅವರು ಈಗಾ ಮತ್ತೆ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃಧ್ಧಿಗೆ ಮುಂದಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ಚಾರಿಟೇಬಲ್ ಟ್ರಸ್ಟ್ “ಶಾಲೆಗಾಗಿ ನಾವು-ನೀವು” ಎಂಬ ಯೋಜನೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹಾಳಸಸಿ ಗ್ರಾಮ, ಎಂ.ಎಲ್. ಹಳ್ಳಿ, ಎಸ್.ಎನ್. ನಗರ ಹಾಗೂ ಆವಿಗೆ ಗ್ರಾಮದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದು, ಶಾಲೆಯಲ್ಲಿ ಓದುವ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ನಿರ್ಧರಿಸಲಾಗಿದೆ.
ನಟ ಸುದೀಪ್ ಅವರ ಕಾರ್ಯಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ತಮ್ಮ ಟ್ವಿಟರ್ ಮೂಲಕ ಅಭಿನಂದನೆಯನ್ನು ಸಲ್ಲಿಸಿದ್ದಾರೆ. “ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು” ಎಂದು ಬರೆದುಕೊಂಡಿದ್ದಾರೆ.