ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ- ಸಾವಿನ ಸಂಖ್ಯೆ 5ಕ್ಕೆ ಏರಿಕೆ…

131
firstsuddi

ಕಲಬುರಗಿ : ಮಹಾಮಾರಿ ಕೊರೊನಾ ವೈರಸ್‍ಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, ಹಾಗೂ ಇಂದು ಹೊಸದಾಗಿ 6 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ ಕೂಡಾ 181ಕ್ಕೆ ಏರಿಕೆಯಾಗಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಕಲಬುರಗಿಯ 65 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಮೃತ ವೃದ್ಧ ನಗರದಲ್ಲಿ ಹಣ್ಣಿನ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡುಸುತ್ತಿದ್ದರು ಎನ್ನಲಾಗಿದ್ದು, ಇವರು ಕೊರೊನಾ ಸೋಂಕಿತರ ಸಂಪರ್ಕಕ್ಕೂ ಬಂದಿಲ್ಲ ಎನ್ನಲಾಗಿದ್ದು, ಈ ಪ್ರಕರಣದಿಂದ ಜಿಲ್ಲಾದ್ಯಂತ ಆತಂಕ ಹೆಚ್ಚಾಗಿದೆ.