ಕೊರೊನಾ ಸೋಂಕಿತರಿಗೆ ಸಹಾಯ ಮಾಡಲು ಆಂಬ್ಯುಲೆನ್ಸ್ ಚಾಲಕನಾದ ನಟ ಅರ್ಜುನ್ ಗೌಡ..!

141
firstsuddi

ಬೆಂಗಳೂರು : ದಿನನಿತ್ಯ ಹಲವಾರು ಸೋಂಕಿತರು ಕೊರೊನಾಗೆ ಬಲಿಯಾಗುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್ ಗಳಿಲ್ಲದೇ ಪರದಾಡುತ್ತಿದ್ದಾರೆ. ಸರಿಯಾದ ಆಕ್ಸಿಜನ್ ಸಿಗುತ್ತಿಲ್ಲ. ಇಂತಹ ಕೊರೊನಾ ಸಂಕಷ್ಟದ ಸಮಯದಲ್ಲಿ ಸೆಲೆಬ್ರಿಟಿಗಳು ತಮ್ಮದೇ ಕೊರೊನಾ ಸಂಕಷ್ಟದ ಕಠಿಣ ಸಮಯದಲ್ಲಿ ಸೆಲೆಬ್ರಿಟಿಗಳು ತಮ್ಮದೇ ಆದ ರೀತಿಯಲ್ಲಿ ಜನರಿಗೆ ಸಹಾಯ ಮಾಡುತ್ತಿದ್ದಾರೆ. ಆದರೆ ನಟ ಅರ್ಜುನ್ ಗೌಡ ಅವರು ಕೊರೊನಾ ಸೋಂಕಿತರಿಗೆ ಸಹಾಯ ಮಾಡಲು ಆಂಬ್ಯುಲೆನ್ಸ್ ಚಾಲಕನಾಗಿದ್ದು, ಎಲ್ಲರ ಗಮನ ಸೆಳೆದಿದ್ದಾರೆ. ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ದರ್ಶನ್ ಮುಂತಾದ ಸ್ಟಾರ್ ನಟರ ಚಿತ್ರಗಳಲ್ಲಿ ಅಭಿನಯಿಸಿರುವ ಅರ್ಜುನ್ ಗೌಡ ಅವರು ಯುವರತ್ನ, ರುಸ್ತುಂ ,ಒಡೆಯ ಮುಂತಾದ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಇದೀಗ ಅರ್ಜುನ್ ಗೌಡ ಅವರು ಕೋವಿಡ್ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಹಾಗೂ ಕೊರೊನಾದಿಂದ ಸಾವನ್ನಪ್ಪುವವರ ಮೃತದೇಹಗಳನ್ನು ಸಾಗಿಸುವ ಆಂಬ್ಯುಲೆನ್ಸ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅರ್ಜುನ್ ಅವರು ಈಗಾಗಲೇ ನಾನು ಹಲವಾರು ಮಂದಿಯ ಅಂತ್ಯಕ್ರಿಯ ಮಾಡುವ ಮೂಲಕ ಸಹಾಯ ಮಾಡಿದ್ದೇನೆ. ಅಗತ್ಯವಿರುವವರಿಗೆ ನನ್ನ ಕೈಲಾದಷ್ಟು ಸಹಾಯ ಮಾಡುತ್ತಿದ್ದೇನೆ. ಸದ್ಯದ ಪರಿಸ್ಥಿತಿ ತುಂಬಾ ಹದಗೆಟ್ಟಿರುವ ಕಾರಣ ನನ್ನ ಈ ಸೇವೆಯನ್ನು ಎರಡು ತಿಂಗಳ ಕಾಲ ಮುಂದುವರಿಸುಲು ನಿರ್ಧರಿಸಿದ್ದೇನೆ ಎಂದು ಅರ್ಜುನ್ ಹೇಳಿದ್ದಾರೆ.

ಸದ್ಯ ಅರ್ಜುನ್ ಅವರ ಸೇವಾ ಕಾರ್ಯಕ್ಕೆ ಎಲ್ಲೆಡೆಯಿಂದಲೂ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.