ಕೊರೊನಾ ಸೋಂಕು ಎಲ್ಲೆಡೆ ಹರಡೋಣ ಬನ್ನಿ ಎಂದ ವ್ಯಕ್ತಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು…

2157
firstsuddi

ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್‍ಗೆ ರಾಜ್ಯದಲ್ಲಿ ಮೂವರು ಬಲಿಯಾಗಿದ್ದು, 62 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಇದರ ನಡುವೆ ಕೊರೊನಾ ಸೋಂಕು ಎಲ್ಲೆಡೆ ಹರಡೋಣ ಬನ್ನಿ ಎಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಜೀಬ್ ಎಂಬ ವ್ಯಕ್ತಿ ತನ್ನ ಫೇಸ್‍ಬುಕ್ ಖಾತೆಯಲ್ಲಿ ಕೊರೊನಾ ಸೋಂಕು ಇರುವವರು ಮನೆಯಿಂದ ಹೊರಗೆ ಬಂದು ಎಲ್ಲೆಡೆ ಸೋಂಕನ್ನು ಹರಡಿ. ಇದರಿಂದ ವಿಶ್ವವೇ ನಾಶವಾಗಲಿ ಎಂದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿ ಆತನ ವಿರುದ್ಧ ಐಪಿಸಿ ಸೆಕ್ಷನ್ 505ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.