ರಾಜ್ಯದಲ್ಲಿ ಕೊರೊನಾ ಸ್ಫೋಟ : ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ.

127
First Suddi

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಮ್ಮ ನಿವಾಸದಲ್ಲಿ ತುರ್ತು ಸಭೆ ಕರೆದಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸಂಪುಟ ಸಚಿವರು, ತಜ್ಞರು, ಆರೋಗ್ಯ ಇಲಾಖೆ ಅಧಿಕಾರಿಗಳು, ವಲಯವಾರು ಉಸ್ತುವಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯದ 8 ನಗರಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೊಳಿಸಿದ್ದರೂ ಸೋಂಕಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನಲ್ಲಿ ದಿನಕ್ಕೆ ಹತ್ತು ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದು, ಸಾವಿನ ಪ್ರಮಾಣವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಎಲ್ಲಾ ಕಾರಣಗಳಿಂದಾಗಿ  ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂಬ ಮಾಹಿತಿ ತಿಳಿದುಬಂದಿದೆ.