ಬೆಂಗಳೂರು : ಕೋರಮಂಗಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹೊಸೂರು ಕ್ಷೇತ್ರದ ಶಾಸಕ ಪ್ರಕಾಶ್ ಪುತ್ರ ಕರುಣಾಸಾಗರ್ ಹಾಗೂ ಪತ್ನಿ ಬಿಂದು ದುರ್ಮರಣ ಹೊಂದಿದ್ದಾರೆ.
ಮಧ್ಯ ರಾತ್ರಿ 1.30ರ ಸುಮಾರಿಗೆ ಕೋರಮಂಗಲದ ಮಂಗಳ ಕಲ್ಯಾಣಮಂಟಪದ ಬಳಿ ನಡೆದ ಘಟನೆ ನಡೆದಿದೆ. ವೇಗವಾಗಿ ಬಂದು ಫುಟ್ಪಾತ್ ಹತ್ತಿ ಡಿವೈಡರ್ ಗೆ ಗುದ್ದಿರುವ ಐಷಾರಾಮಿ ಕಾರು ಬಳಿಕ ಪಕ್ಕದ ಕಟ್ಟಡದ ಗೋಡೆಗೆ ಡಿಕ್ಕಿಯಾಗಿದೆ. ಆಡಿ ಕ್ಯೂ 3 ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ನಾಲ್ವರು ಪುರುಷರು ಒಟ್ಟು 7 ಜನ ಸಾವನ್ನಪ್ಪಿದ್ದಾರೆ. 6 ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಎಲ್ಲರೂ 25-30ರ ವಯೋಮಾನದವರು ಮತ್ತು ಸ್ನೇಹಿತರು ಎಂದು ತಿಳಿದುಬಂದಿದೆ.
ಮೃತರನ್ನು ಕರುಣಾಸಾಗರ, ಬಿಂದು (28), ಇಶಿತಾ (21), ಡಾ.ಧನುಶಾ (21), ಕೇರಳ ಮೂಲದ ಅಕ್ಷಯ್ ಗೋಯಲ್, ಉತ್ಸವ್, ರೋಹಿತ್ (23), ಹರಿಯಾಣದ ಉತ್ಸವ್, ಹುಬ್ಬಳ್ಳಿಯ ರೋಹಿತ್ ಎಂದು ಗುರುತಿಸಲಾಗಿದೆ.
ಕೆಎ 03 ಎಂವೈ 6666 ನೋಂದಣಿ ಸಂಖ್ಯೆಯ ಕಾರು ಇದಾಗಿದ್ದು, ಅಪಘಾತ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂದಿನ ಸೀಟ್ ತುಂಬಾ ರಕ್ತದ ಕಲೆಗಳಿದ್ದು ಕಾರಿನ ಎಡಭಾಗದ 2 ಟೈರ್ ಸಂಪೂರ್ಣ ಪೀಸ್ ಪೀಸ್ ಆಗಿದೆ. ಸದ್ಯ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿರುವ 7 ಜನರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಮೃತರಲ್ಲಿ ಕೆಲವರು ಕೋರಮಂಗಲದ ಜೋಲೋ ಸ್ಟೇ ಪಿಜಿಯಲ್ಲಿ ವಾಸವಿದ್ರು. ಈ ಸಂಬಂಧ ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.










